Sunday, 12 September 2021

ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ `ಎತ್ತಿನಗಾಡಿ ಚಲೋ' : ಎತ್ತಿನ ಗಾಡಿಯಲ್ಲಿ ಅಧಿವೇಶನಕ್ಕೆ ಬಂದ ಕೈ ನಾಯಕರು!


ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ `ಎತ್ತಿನಗಾಡಿ ಚಲೋ' : 
ಎತ್ತಿನ ಗಾಡಿಯಲ್ಲಿ ಅಧಿವೇಶನಕ್ಕೆ ಬಂದ ಕೈ ನಾಯಕರು!

ಬೆಂಗಳೂರು :ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ 

ಈ ನಡುವೆ ರಾಜ್ಯ ಸರ್ಕಾರಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ಮುಟ್ಟಿಸಲು ಮುಂದಾಗಿರುವ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯೇರಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎತ್ತಿನಗಾಡಿಯನ್ನು ಏರಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಅಧಿಕೃತ ನಿವಾಸದಿಂದ ವಿಧಾನಸೌಧದತ್ತ ತೆರಳಿದ ಸಿದ್ದರಾಮಯ್ಯಗೆ ಎಸ್​.ಆರ್.ಪಾಟೀಲ್. ಎಂ‌.ಬಿ.ಪಾಟೀಲ್ ಮತ್ತು ಪರಿಷತ್ ಸದಸ್ಯ ನಜಿರ್ ಅಹಮದ್ ಸಾಥ್ ನೀಡುತ್ತಿದ್ದಾರೆ.

ರಾಜ್ಯ ಸರ್ಕಾರ ಜನರಿಂದ ಪ್ರತಿದಿನ ಪಿಕ್ ಪಾಕೆಟ್ ಮಾಡುತ್ತಿದೆ. ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಹೀಗಾಗಿ ಸರ್ಕಾರಕ್ಕೆ ಬಿಸಿಮುಟ್ಟಿಸಲು ಎತ್ತಿನಗಾಡಿಯಲ್ಲಿ ಹೋರಾಟ ನಡೆಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.



SHARE THIS

Author:

0 التعليقات: