Friday, 3 September 2021

ಚಿನ್ನದ ಬೆಲೆ ಸ್ವಲ್ಪ ಕುಸಿತ:

ಚಿನ್ನದ ಬೆಲೆ ಸ್ವಲ್ಪ ಕುಸಿತ:

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,350 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,580 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 100 ರೂಪಾಯಿ ಏರಿಕೆಗೊಂಡು 63,600 ರೂಪಾಯಿಗೆ ತಲುಪಿದೆ.

ಎಂಸಿಎಕ್ಸ್‌ನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ ಇಳಿಕೆಯಾಗಿ 47,125ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಹಿಗ್ಗಿ 63,701ರು ನಷ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.30ರಷ್ಟು ಏರಿಕೆಯಾಗಿ 1,814.98 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.77ರಷ್ಟು ಇಳಿಕೆಯಾಗಿ 24.08 ಯುಎಸ್ ಡಾಲರ್ ಆಗಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.



SHARE THIS

Author:

0 التعليقات: