Thursday, 2 September 2021

ಕಬಕ ಸ್ವಾತಂತ್ರ್ಯೋತ್ಸವದ ರಥಕ್ಕೆ ಅಡ್ಡಿ ಪ್ರಕರಣ: ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ


 ಕಬಕ ಸ್ವಾತಂತ್ರ್ಯೋತ್ಸವದ ರಥಕ್ಕೆ ಅಡ್ಡಿ ಪ್ರಕರಣ: ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಪುತ್ತೂರು: ಕಬಕ ಗ್ರಾಪಂ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂದರ್ಭ ಕಬಕ ಗ್ರಾಪಂನ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಏಳು ಆರೋಪಿಗಳ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ನಡುವೆ ಮೂವರಿಗೂ ಪುತ್ತೂರು ನ್ಯಾಯಾಲಯ ವಿಚಾರಣೆ ನಡೆಸಿ ಜಾಮೀನು ಮುಂಜೂರು ಮಾಡಿತ್ತು. ಉಳಿದ ನಾಲ್ವರು ಆರೋಪಿಗಳಾದ ನೌಶಾದ್, ಮುಹಮ್ಮದ್ ಹಾರಿಸ್, ಮಹಮ್ಮದ್ ತೌಸೀಫ್ ಹಾಗೂ ಸಂಶುದ್ದೀನ್ ಎಂಬವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.


SHARE THIS

Author:

0 التعليقات: