Thursday, 2 September 2021

ಭಾರತಕ್ಕೆ ಬರುವವರಿಗೆ ಆರ್ಟಿ-ಪಿಸಿಆರ್ ಕಡ್ಡಾಯ

 

ಭಾರತಕ್ಕೆ ಬರುವವರಿಗೆ ಆರ್ಟಿ-ಪಿಸಿಆರ್ ಕಡ್ಡಾಯ

ನವದೆಹಲಿ: ಪ್ರಪಂಚದಾದ್ಯಂತ ಕೊರೋನಾ ರೂಪಾಂತರ ಪ್ರಕರಣಗಳು ನಿಧಾನವಾಗಿ ಏರಿಕೆಯಾಗುತ್ತಿರುವುದ್ರಿಂದ ಕೆಲವು ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ RTPCR ಪರೀಕ್ಷೆ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಬೊಟ್ಸ್ ವಾನ, ಚೀನಾ, ಮಾರಿಷಸ್, ನ್ಯೂಜಿಲ್ಯಾಂಡ್ ಮತ್ತು ಜಿಂಬಾಬ್ವೆ, ಇಯು, ಇಂಗ್ಲೆಂಡ್​ನಲ್ಲಿ ರೂಪಾಂತರ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿಂದ ಭಾರತಕ್ಕೆ ಬರುವವರಿಗೆ RTPCR ಕಡ್ಡಾಯಗೊಳಿಸಲಾಗಿದೆ. ಈ ಕುರಿತು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಕೋವಿಡ್ ರೂಪಾಂತರ ಪ್ರಕರಣಗಳು ಹೆಚ್ಚುತ್ತಿರುವ ದೇಶಗಳಾದ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಬೊಟ್ಸ್ ವಾನ, ಚೀನಾ, ಮಾರಿಷಸ್, ನ್ಯೂಜಿಲ್ಯಾಂಡ್ ಮತ್ತು ಜಿಂಬಾಬ್ವೆ​ನಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು. ಇಲ್ಲಿಗೆ ಬಂದ ನಂತರವೂ ಆರ್​ ಪರೀಕ್ಷೆಗೆ ಒಳಪಡಬೇಕು ಎಂದು ತಿಳಿಸಿದ್ದಾರೆ.SHARE THIS

Author:

0 التعليقات: