Thursday, 9 September 2021

ರಾಜ್ಯದಲ್ಲಿ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್'

 

ರಾಜ್ಯದಲ್ಲಿ ಭಾರೀ ಮಳೆ : 

ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' 

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಸೆ. 12ರವರೆಗೂ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ,


ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.




SHARE THIS

Author:

0 التعليقات: