Saturday, 11 September 2021

ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜಿನಾಮೆ

 

ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜಿನಾಮೆ

ಅಹಮದಾಬಾದ್ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಶನಿವಾರ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ಸಲ್ಲಿಸಿದ್ದಾರೆ.ರೂಪಾನಿಯವರು ನಾಲ್ವರು ಸಚಿವರ ಜೊತೆಗಿದ್ದರು. ವರದಿಗಳ ಪ್ರಕಾರ, ಆಡಳಿತಾರೂ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ಅವರೊಂದಿಗಿನ ಭಿನ್ನಾಭಿಪ್ರಾಯದ ನಡುವೆ ರೂಪಾನಿ ರಾಜೀನಾಮೆ ನೀಡಬಹುದೆಂದು ಹಲವಾರು ಊಹಾಪೋಹಗಳು ನಡೆದಿತ್ತು.

ಈ ಹಿಂದೆ, ಗುಜರಾತ್ ಸರ್ಕಾರದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ಅವರು ಮುಖ್ಯಮಂತ್ರಿ ವಿಜಯ ರೂಪಾನಿ ಮತ್ತು ಅವರ ಉಪ ನಿತಿನ್ ಪಟೇಲ್ ನೇತೃತ್ವದಲ್ಲಿ ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.
SHARE THIS

Author:

0 التعليقات: