Monday, 6 September 2021

ಗ್ಯಾಸ್ ಗೀಸರ್ ಸೋರಿಕೆ: ಉಸಿರುಗಟ್ಟಿ ವೈದ್ಯ ವಿದ್ಯಾರ್ಥಿನಿ ಸಾವು


 ಗ್ಯಾಸ್ ಗೀಸರ್ ಸೋರಿಕೆ: ಉಸಿರುಗಟ್ಟಿ ವೈದ್ಯ ವಿದ್ಯಾರ್ಥಿನಿ ಸಾವು

ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಾಕೆ ಸಾವನ್ನಪ್ಪಿದ ಘಟನೆ ಮಹಾಲಕ್ಷ್ಮೀ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಪದಾ(23) ಎಂಬಾಕೆ ಮೃತಪಟ್ಟ ದುರ್ದೈವಿ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿ ಸೆ.4ರಂದು ಸ್ನಾನಕ್ಕೆ ತೆರಳಿದ್ದಾಗ ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ನಾನ ಮಾಡಲು ಮಧ್ಯಾಹ್ನ 12:30ಕ್ಕೆ ಹೋಗಿದ್ದ ವಿದ್ಯಾರ್ಥಿನಿ 2 ಗಂಟೆಯಾದರೂ ಹೊರಬಂದಿರಲಿಲ್ಲ. ಅನುಮಾನದಿಂದ ಕೊಠಡಿಯ ಬಾಗಿಲು ಒಡೆದು ನೋಡಿದಾಗ ಪ್ರಜ್ಞೆತಪ್ಪಿ ಬಿದ್ದಿರುವುದು ಬೆಳಕಿಗೆ ಬಂದಿತ್ತು ಎನ್ನಲಾಗಿದೆ.

ತಕ್ಷಣವೇ ವಿದ್ಯಾರ್ಥಿನಿ ಸಂಪದಾಳನ್ನು ಆಸ್ಪತ್ರೆಗೆ ಕರೆತಂದರೂ ಮಾರ್ಗಮಧ್ಯೆಯೇ ಆಕೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.


SHARE THIS

Author:

0 التعليقات: