Monday, 18 October 2021

ರಾಜ್ಯದಲ್ಲಿಂದು 214 ಮಂದಿಗೆ ಕೊರೋನ ದೃಢ, 12 ಮಂದಿ ಸಾವು

 ರಾಜ್ಯದಲ್ಲಿಂದು 214 ಮಂದಿಗೆ ಕೊರೋನ ದೃಢ, 12 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 214 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 12 ಜನರು ಸೋಂಕಿಗೆ ಬಲಿಯಾಗಿದ್ದು, 488 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,83,673ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,953ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 9,164ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

12 ಸೋಂಕಿತರು ಬಲಿ: ಬೆಂಗಳೂರು ನಗರ 4, ಚಿಕ್ಕಬಳ್ಳಾಪುರ 1, ಹಾಸನ 1, ಕೊಡಗು 1, ಮಂಡ್ಯ 1, ಮೈಸೂರು 2, ತುಮಕೂರು 1, ಉಡುಪಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 214 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 1, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 83, ಬೀದರ್ 1, ಚಾಮರಾಜನಗರ 2, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 22, ಹಾಸನ 13, ಕಲಬುರಗಿ 2, ಕೊಡಗು 7, ಕೋಲಾರ 5, ಮಂಡ್ಯ 6, ಮೈಸೂರು 27, ಶಿವಮೊಗ್ಗ 13, ತುಮಕೂರು 14, ಉಡುಪಿ 3, ಉತ್ತರ ಕನ್ನಡ ಜಿಲ್ಲೆಯಲ್ಲಿ 5 ಪ್ರಕರಣ ಪತ್ತೆಯಾಗಿವೆ.  

ರಾಜಧಾನಿಯಲ್ಲಿ 83 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಸೋಮವಾರದಂದು 83 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 4 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,49,501 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,214 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,26,541 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 


SHARE THIS

Author:

0 التعليقات: