Tuesday, 19 October 2021

ಕೋವಿಡ್ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; 24 ಗಂಟೆಯಲ್ಲಿ 197 ಜನ ಮಹಾಮಾರಿಗೆ ಬಲಿ


ಕೋವಿಡ್ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; 
24 ಗಂಟೆಯಲ್ಲಿ 197 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 14,623 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,41,08,996ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡಿದ್ದು, 24 ಗಂಟೆಯಲ್ಲಿ 197 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 452651 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 178098 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 19446 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33478247 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 13,23,702 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 41,36,142 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 99,12,82,283 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.


SHARE THIS

Author:

0 التعليقات: