Monday, 25 October 2021

ರಾಜ್ಯಾದ್ಯಂತ 290 ಕೊರೋನ ಪ್ರಕರಣ ದೃಢ, 10 ಮಂದಿ ಸಾವು


 ರಾಜ್ಯಾದ್ಯಂತ 290 ಕೊರೋನ ಪ್ರಕರಣ ದೃಢ, 10 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 290 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 10 ಜನರು ಸೋಂಕಿಗೆ ಬಲಿಯಾಗಿದ್ದು, 408 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,86,276ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,017ಕ್ಕೆ ತಲುಪಿದೆ.        

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 8,583ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

10 ಸೋಂಕಿತರು ಬಲಿ: ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 6, ಧಾರವಾಡ 1, ರಾಮನಗರ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 290 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 137, ಚಾಮರಾಜನಗರ 2, ಚಿಕ್ಕಮಗಳೂರು 6, ಚಿತ್ರದುರ್ಗ 1, ದಕ್ಷಿಣ ಕನ್ನಡ 30, ಧಾರವಾಡ 2, ಹಾಸನ 20, ಕಲಬುರಗಿ 3, ಕೊಡಗು 7, ಕೋಲಾರ 7, ಕೊಪ್ಪಳ 1, ಮಂಡ್ಯ 4, ಮೈಸೂರು 18, ಶಿವಮೊಗ್ಗ 3, ತುಮಕೂರು 26, ಉಡುಪಿ 4, ಉತ್ತರ ಕನ್ನಡ 15, ವಿಜಯಪುರ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ. 


SHARE THIS

Author:

0 التعليقات: