Thursday, 14 October 2021

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : `ಆರೆಂಜ್' ಅಲರ್ಟ್ ಘೋಷಣೆ

 

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ :
`ಆರೆಂಜ್' ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ 3 ದಿನ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದಿನಿಂದ ಅಕ್ಟೋಬರ್ 17 ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




SHARE THIS

Author:

0 التعليقات: