Wednesday, 20 October 2021

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ : 15 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ


ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ : 15 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ  ಇನ್ನೂ ಕೆಲವು ದಿನಗಳ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ.26 ರಂದು ರಾಜ್ಯದಿಂದ ಮುಂಗಾರು ನಿರ್ಗಮಿಸಲಿದ್ದು, ಹಿಂಗಾರು ಮಾರುತಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವು ಕಡೆ ಸಿಡಿಲು, ಗುಡುಗು, ಮಿಂಚಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅಕ್ಟೋಬರ್ 22 ರಿಂದ 24 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.



SHARE THIS

Author:

0 التعليقات: