Tuesday, 5 October 2021

ರಾಜ್ಯದಲ್ಲಿಂದು 523 ಮಂದಿಗೆ ಕೊರೋನ ದೃಢ, 14 ಮಂದಿ ಮೃತ್ಯು

 ರಾಜ್ಯದಲ್ಲಿಂದು 523 ಮಂದಿಗೆ ಕೊರೋನ ದೃಢ, 14 ಮಂದಿ ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 523 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 14 ಜನರು ಸೋಂಕಿಗೆ ಬಲಿಯಾಗಿದ್ದು, 575 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,78,808ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,845ಕ್ಕೆ ತಲುಪಿದೆ.     
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 11,926ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

14 ಸೋಂಕಿತರು ಬಲಿ

ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 4, ದಕ್ಷಿಣ ಕನ್ನಡ 1, ಗದಗ 1, ಮೈಸೂರು 2, ತುಮಕೂರು 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು:

ರಾಜ್ಯದಲ್ಲಿ ಹೊಸದಾಗಿ 523 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 7, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 201, ಚಾಮರಾಜನಗರ 3, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 48, ಚಿತ್ರದುರ್ಗ 9, ದಕ್ಷಿಣ ಕನ್ನಡ 55, ದಾವಣಗೆರೆ 2, ಧಾರವಾಡ 5, ಹಾಸನ 23, ಕಲಬುರಗಿ 1, ಕೊಡಗು 7, ಕೋಲಾರ 5, ಮಂಡ್ಯ 11, ಮೈಸೂರು 33, ರಾಯಚೂರು 1, ರಾಮನಗರ 5, ಶಿವಮೊಗ್ಗ 5, ತುಮಕೂರು 37, ಉಡುಪಿ 19, ಉತ್ತರ ಕನ್ನಡ 26, ವಿಜಯಪುರ    ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿವೆ.  

ರಾಜಧಾನಿಯಲ್ಲಿ 201 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಮಂಗಳವಾರದಂದು 201 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 4 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,47,459 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,173 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,23,686 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 


SHARE THIS

Author:

0 التعليقات: