Tuesday, 5 October 2021

ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ 6 ಮಂದಿ ಸಾವು :ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ ಘೋಷಣೆ

ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ 6 ಮಂದಿ ಸಾವು :ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಕಲುಷಿತ ನೀರುಸೇವಿಸಿ 6 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಲಾ ಮೂರು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 6 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಹಿರಿಯ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ನೇತೃತ್ವದಲ್ಲಿ ತನಿಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಲುಷಿತ ನೀರು ಸೇವಿಸಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ 3 ಲಕ್ಷ ರೂ.ಪರಿಹಾರ ನೀಡಲಾಗುವುದು. ಕಲುಷಿತ ನೀರು ಕುಡಿಯುವ ನೀರಿಗೆ ಹೇಗೆ ಮಿಶ್ರವಾಗಿದೆ ಎನ್ನುವ ಬಗ್ಗೆ ವರದಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.



SHARE THIS

Author:

0 التعليقات: