ಮೈಸೂರಿನ ವಿದ್ಯುತ್ ದೀಪಾಲಂಕಾರ 9 ದಿನ ವಿಸ್ತರಣೆ - ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಮೈಸೂರು : ನಗರದಲ್ಲಿ ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.
ಇಂದು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನಾಡಿನ ವಿವಿಧ ಕಡೆಗಳಿಂದ ಪ್ರವಾಸಿಗರು ದೊಡ್ಡ ಪ್ರಮಾಣದಲ್ಲಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜನಪ್ರತಿನಿಧಿಗಳು ಮತ್ತು ಜನತೆಯ ಬೇಡಿಕೆಯ ಮೇರೆಗೆ ವಿದ್ಯುತ್ ದೀಪಾಲಂಕಾರವನ್ನು ವಿಸ್ತರಿಸುತ್ತಿರುವುದಾಗಿ ತಿಳಿಸಿದರು.
ಅಂದಹಾಗೇ ಮೈಸೂರು ದಸರಾ ಸಂದರ್ಭದಲ್ಲಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದು, ನಗರ ವಿವಿದೆಡೆ ಅಳವಡಿಸಿರುವಂತ ವಿದ್ಯುತ್ ದೀಪಾಲಂಕಾರಗಳು. ಈ ದೀಪಾಲಂಕಾರ ನೋಡೋದಕ್ಕೆ ವಿವಿಧೆಡೆಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಂತಹ ಪ್ರವಾಸಿಗರ ವೀಕ್ಷಣೆಗಾಗಿ ಇದೀಗ ಮತ್ತೆ ಮುಂದಿನ 9 ದಿನಗಳ ಕಾಲ ವಿದ್ಯುತ್ ದೀಪಾಲಂಕಾರವನ್ನು ವಿಸ್ತರಣೆ ಮಾಡಿ ಸಿಎಂ ಆದೇಶಿಸಿದ್ದಾರೆ.
0 التعليقات: