Wednesday, 13 October 2021

ದುಷ್ಕರ್ಮಿಗಳ ತಂಡದಿಂದ ವ್ಯಕ್ತಿಗೆ ಚೂರಿ ಇರಿತ


ದುಷ್ಕರ್ಮಿಗಳ ತಂಡದಿಂದ ವ್ಯಕ್ತಿಗೆ ಚೂರಿ ಇರಿತ

ಮಂಗಳೂರು: ನಗರದ ಮಾಲೆಮಾರ್ ಬಳಿ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಬೆನ್ನಿಗೆ ಇರಿದು ಪರಾರಿಯಾದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.

ಪಂಜಿಮೊಗರು ನಿವಾಸಿ ರಾಜೇಶ್ (45) ಗಾಯಗೊಂಡವರು.ರಾಜೇಶ್ ಎಂದಿನಂತೆ ಕೆಲಸ ಮುಗಿಸಿ ಕೊಟ್ಟಾರದಿಂದ ಹೋಗುತ್ತಿದ್ದಾಗ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಕಾವೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.SHARE THIS

Author:

0 التعليقات: