ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವಿನ ಎನ್ ಕೌಂಟರ್ ನಲ್ಲಿ ಸೇನಾ ಅಧಿಕಾರಿ ಮತ್ತು ಇತರ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿ ಬಂದ ನಂತರ ಸುರಂಕೋಟೆಯ ಡೇರಾ ಕಿ ಗಾಲಿ ಸಮೀಪದ ಗ್ರಾಮದಲ್ಲಿ ಮುಂಜಾನೆ ಈ ಕಾರ್ಯಾಚರಣೆಯನ್ನು ಆರಂಭಿಸಲಾಯಿತು . ಅಡಗಿದ್ದ ಭಯೋತ್ಪಾದಕರು ಶೋಧನಾ ತಂಡಗಳ ಮೇಲೆ ಭಾರೀ ಗುಂಡಿನ ದಾಳಿ ನಡೆಸಿದ್ದು, ಇದರ ಪರಿಣಾಮವಾಗಿ ಜೂನಿಯರ್ ಕಮಿಷನ್ಡ್ ಆಫೀಸರ್ ಅಥವಾ ಜೆಸಿಒ ಹಾಗೂ ಇತರ ನಾಲ್ವರು ಯೋಧಗಳಿಗೆ ಗಂಭೀರ ಗಾಯಗಳಾಗಿವೆ. ನಂತರ ಅವರು ಗಂಭೀರ ಗಾಯಗಳಿಂದ ಸಾವನ್ನಪ್ಪಿದರು ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ನಿಯಂತ್ರಣ ರೇಖೆ (ಎಲ್ಒಸಿ) ಯಿಂದ ನುಸುಳಲು ಯಶಸ್ವಿಯಾದ ನಂತರ, ಚಮರ್ ಅರಣ್ಯದಲ್ಲಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪು ಇರುವ ಬಗ್ಗೆ ವರದಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
0 التعليقات: