Thursday, 28 October 2021

ರಾಯಚೂರು ಜನರಿಗೆ ಶಾಕ್ ಕೊಟ್ಟ ಡೆಂಗ್ಯೂ: ಐವರು ಬಲಿ


ರಾಯಚೂರು ಜನರಿಗೆ ಶಾಕ್ ಕೊಟ್ಟ ಡೆಂಗ್ಯೂ: ಐವರು ಬಲಿ

ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇದುವರೆಗೆ 1,514 ಜನರಿಗೆ ಜ್ವರ ಕಾಣಿಸಿಕೊಂಡಿದ್ದು, ಇವರಲ್ಲಿ 73 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಅಲ್ಲದೇ ಡೆಂಗ್ಯೂ ರೋಗಕ್ಕೆ ಐವರು ಬಲಿಯಾಗಿದ್ದಾರೆ.

ಈ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ್ ಅವರು ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಜುಲೈನಿಂದ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಜಿಲ್ಲೆಯ 1,514 ಜನರಿಗೆ ಜ್ವರ ಕಾಣಿಸಿಕೊಂಡಿದ್ದರೇ, 73 ಜನರಿಗೆ ಡೆಂಗ್ಯೂ ಸೋಂಕಿರೋದು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

ಇನ್ನೂ ಡೆಂಗ್ಯೂ ಸೋಂಕಿನ ಶಂಕೆಯಿಂದ ಒಂದೇ ತಿಂಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ವಾಂತಿ, ಬೇಧಿಯಿಂದ ಸಾವನ್ನಪ್ಪಿದ್ದು, ಇದುವರೆಗೆ ಐವರು ಡೆಂಗ್ಯೂ ಶಂಕೆಯಿಂದ ಸಾವನ್ನಪ್ಪಿರೋದಾಗಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕಾಡುತ್ತಿರುವಂತ ಡೆಂಗ್ಯೂ ನಿಯಂತ್ರಣಕ್ಕಾಗಿ ಈಗಾಗಲೇ 23 ತಂಡಗಳನ್ನು ರಚಿಸಲಾಗಿದೆ. ಮನೆ ಮನೆಗೂ ತೆರಳಿ ಡೆಂಗ್ಯೂ ಸರ್ವೆ ಕಾರ್ಯವನ್ನು ನಡೆಸಲಾಗುತ್ತಿದೆ ಎಂಬುದಾಗಿ ಮಾಹಿತಿ ನೀಡಿದರು.
SHARE THIS

Author:

0 التعليقات: