ಬಂಟ್ವಾಳ: ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣ; ಇಬ್ಬರು ಪೊಲೀಸ್ ವಶಕ್ಕೆ
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿ ಅಮ್ಟಾಡಿ ಎಂಬಲ್ಲಿ ನಡೆದಿರುವ ಅಪ್ರಾಪ್ತ ವಯಸ್ಸಿನ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಶಾಲೆಗೆಂದು ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಬಂದ ಪರಿಚಿತನೋರ್ವ ಸೇರಿದಂತೆ ಆರೋಪಿಗಳು ಅಪಹರಿಸಿ ಅತ್ಯಾಚಾರ ಎಸಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಾಲಕಿಯನ್ನು ಯಾವುದೋ ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಬಳಿಕ ಆಕೆಯನ್ನು ಬ್ರಹ್ಮರಕೂಟ್ಲು ಬಳಿ ಬಿಟ್ಟು ಹೋಗಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ ಎನ್ನಲಾಗಿದೆ.
0 التعليقات: