ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಶರಣು
ಗದಗ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಮಾಹಿತಿ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
0 التعليقات: