Monday, 11 October 2021

ಕೊಣಾಜೆ; ಲೈಂಗಿಕ ಕಿರುಕುಳ ಆರೋಪದಲ್ಲಿ ಹಲ್ಲೆ : ಮೂರು ಮಂದಿ ಸೆರೆ


 ಕೊಣಾಜೆ; ಲೈಂಗಿಕ ಕಿರುಕುಳ ಆರೋಪದಲ್ಲಿ ಹಲ್ಲೆ : ಮೂರು ಮಂದಿ ಸೆರೆ

ಕೊಣಾಜೆ: ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು‌ ಬಂಧಿಸಿ ಕೇಸು ದಾಖಲಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹಿತೇಶ್ ಶೆಟ್ಟಿ, ಶರತ್ ಗಟ್ಟಿ ಹಾಗೂ ಚಿತ್ತರಂಜನ್ ಎಂದು ಗುರುತಿಸಲಾಗಿದೆ.

ಕೊಣಾಜೆ ಪೇಟೆಯಲ್ಲಿ ಅಂಗಡಿಗೆ ಬಂದಿದ್ದ 12ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಪೊಲೀಸರು ಆರೋಪಿ ಉಸ್ಮಾನ್ ಎಂಬಾತನನ್ನು ಬಂಧಿಸಿ ಪೋಕ್ಸೊ ಪ್ರಕರಣ‌ ದಾಖಲಿಸಿದ್ದರು. ಆದರೆ ಪೊಲೀಸರ ಬಂಧನಕ್ಕೆ ಮುಂಚೆ ಈ ಮೂವರು ಅಂಗಡಿಯೊಳಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿದೂರು ದಾಖಲಾಗಿತ್ತು. ಬಳಿಕ ಪೊಲೀಸರು ಈ ಮೂವರ ವಿರುದ್ದ ಪ್ರಕರಣ ದಾಖಲಿಸಿ ಜಾಮೀನಿನ ಮೂಲಕ ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. 


SHARE THIS

Author:

0 التعليقات: