"ನಾವೆಲ್ಲರೂ ನಿಮ್ಮೊಂದಿಗಿದ್ದೇವೆ": ಭಾರತದ ಕ್ರಿಕೆಟಿಗ ಮುಹಮ್ಮದ್ ಶಮಿಗೆ ರಾಹುಲ್ ಗಾಂಧಿ ಬೆಂಬಲ
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಾಮಾಜಿಕ ಜಾಲತಾಣದಲ್ಲಿ ನಿಂದನೆಗೆ ಒಳಗಾಗಿರುವ ಭಾರತೀಯ ಕ್ರಿಕೆಟಿಗ ಮುಹಮ್ಮದ್ ಶಮಿಗೆ ಟ್ವಿಟರ್ ಮೂಲಕ ಬೆಂಬಲ ವ್ಯಕ್ತಪಡಿಸಿದರು.
“ಮುಹಮ್ಮದ್ ಶಮಿ ನಾವೆಲ್ಲರೂ ನಿಮ್ಮೊಂದಿಗಿದ್ದೇವೆ. ಈ ಜನರು ದ್ವೇಷದಿಂದ ತುಂಬಿದ್ದಾರೆ. ಏಕೆಂದರೆ ಯಾರೂ ಅವರಿಗೆ ಯಾವುದೇ ಪ್ರೀತಿಯನ್ನು ನೀಡಿಲ್ಲ. ಅವರನ್ನು ಕ್ಷಮಿಸಿ ಬಿಡಿ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.
ರವಿವಾರ ಪಾಕಿಸ್ತಾನದ ವಿರುದ್ಧ ಭಾರತ ತಂಡ 10 ವಿಕೆಟ್ ಗಳಿಂದ ಸೋತ ನಂತರ ವೇಗದ ಬೌಲರ್ ಮುಹಮ್ಮದ್ ಶಮಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗೆ ಒಳಗಾಗಿದ್ದರು.
0 التعليقات: