ಮಗುವನ್ನು ಬದಲಿಸಲಾಗಿಲ್ಲ: ಲೇಡಿಗೋಶನ್ ಆಸ್ಪತ್ರೆ ಸ್ಪಷ್ಟನೆ
ಮಂಗಳೂರು: ಕುಂದಾಪುರದ ಮಹಿಳೆಯೊಬ್ಬರ ಹೆರಿಗೆಯ ಸಂದರ್ಭ ಹೆಣ್ಣು ಮಗು ಎಂದು ಹೇಳಿ 18 ದಿನಗಳ ಬಳಿಕ ಮಗುವನ್ನು ಬೇರೆ ಆಸ್ಪತ್ರೆಗೆ ದಾಖಲಿಸಿದಾಗ ಪೋಷಕರಿಗೆ ಆ ಮಗು ಗಂಡು ಮಗು ಎಂಬುದಾಗಿ ತಿಳಿದು ಬಂದ ಪ್ರಕರಣಕ್ಕೆ ಸಂಬಂಧಿಸಿ, ಮಗುವಿನ ಜನನದ ಲಿಖಿತ ರೂಪದ ಎಂಟ್ರಿ ವೇಳೆ ಕರ್ತವ್ಯದಲ್ಲಿದ್ದವರಿಂದ ತಪ್ಪಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.
ಪ್ರಕರಣದ ಕುರಿತಂತೆ ‘ವಾರ್ತಾಭಾರತಿ’ ಇಂದು ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾ ಪ್ರಸಾದ್ ಅವರನ್ನು ಈ ಬಗ್ಗೆ ವಿಚಾರಿಸಿದಾಗ, ‘‘ಮಗುವಿನ ಜನನದ ಸಂದರ್ಭ ಕೇಸ್ ಶೀಟ್ನಲ್ಲಿ ಮಗುವಿನ ಲಿಂಗವನ್ನು ದಾಖಲಿಸುವಾಗ ಮಾಡಲಾದ ತಪ್ಪಿನಿಂದ ಪೋಷಕರೂ ಗೊಂದಲದ ಜತೆಗೆ ಒತ್ತಡಕ್ಕೆ ಕಾರಣವಾಗಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆಯನ್ನು ಮಾಡಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು. ಮಾತ್ರವಲ್ಲದೆ ಈ ಬಗ್ಗೆ ಜಿಲ್ಲಾಧಿಕಾರಿಯವರ ಗಮನಕ್ಕೂ ತರಲಾಗಿದ್ದು, ಅವರಿಗೂ ಪ್ರಕರಣದ ವರದಿಯನ್ನು ಶೀಘ್ರವೇ ಒಪ್ಪಿಸಲಾಗುವುದು’’ ಎಂದು ಅವರು ಹೇಳಿದ್ದಾರೆ.
0 التعليقات: