Saturday, 16 October 2021

ದಾವಣಗೆರೆ; ಭಾರೀ ಮಳೆಗೆ ಮನೆ ಕುಸಿತ: ಓರ್ವ ಮೃತ್ಯು

 

ದಾವಣಗೆರೆ; ಭಾರೀ ಮಳೆಗೆ ಮನೆ ಕುಸಿತ: ಓರ್ವ ಮೃತ್ಯು

ದಾವಣಗೆರೆ: ಭಾರೀ ಮಳೆಯಿಂದಾಗಿ ಮನೆ ಕುಸಿದು ಓರ್ವ ಮೃತಪಟ್ಟಿದ್ದು, ಇನ್ನೊಬ್ಬರಿಗೆ ತೀವ್ರ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ನರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಮಂಜುನಾಥ (48) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಯಾಳು ವ್ಯಕ್ತಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 

ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಮನೆ ಕುಸಿದಿದ್ದು, ಗಂಭೀರವಾಗಿ ಗಾಯಗೊಂಡ ಮಂಜುನಾಥ ಅವರನ್ನು ಆಸ್ಪತ್ರೆ ಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 


SHARE THIS

Author:

0 التعليقات: