ದಸರಾ ಆಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಾದ್ಯಂತ ನಡೆಯಲಿರುವ ದಸರಾ ಆಚರಣೆಗೆ ಸಂಭಂಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮೈಸೂರು ದಸರಾ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದು, ಸರಳವಾಗಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದ್ದು, ಅರಮನೆ ಆವರಣದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಅ.15ರಂದು ನಡೆಯಲಿರುವ ಜಂಬೂ ಸವಾರಿಯಲ್ಲಿ 500 ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಿ ಅನುಮತಿ ನೀಡಿದೆ.
ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಆಚರಣೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ. ಸುರಕ್ಷಿತ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುವುದು ಎಂದು ತಿಳಿಸಿದೆ.
ಆಚರಣೆಯಲ್ಲಿ ಭಾಗವಹಿಸುವವರು ಕನಿಷ್ಠ ಒಂದು ಕೋವಿಡ್ ಲಸಿಕೆ ಪಡೆದಿರಬೇಕು. ಅ.4ರ ನಂತರದ ಕೋವಿಡ್ ತಪಾಸಣೆ ನಡೆಸಿ ಕೊರೋನ ಸೋಂಕು ಇಲ್ಲದಿರುವ ಬಗ್ಗೆ ದೃಢಪಡಿಸುವ ಪ್ರಮಾಣ ಪತ್ರ ಹೊಂದಿರಬೇಕು. ಮಾಸ್ಕ್ ಕಡ್ಡಾಯ ಹಾಗೂ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವುದು ಜಿಲ್ಲಾಡಳಿತ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.
ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಇತರೆ ಇಲಾಖೆ ಮುಖ್ಯಸ್ಥರುಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಅಂತ ತಿಳಿಸಿದೆ.
0 التعليقات: