Friday, 15 October 2021

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ನವಜೋತ್ ಸಿಂಗ್ ಸಿಧು


ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ನವಜೋತ್ ಸಿಂಗ್ ಸಿಧು

ಹೊಸದಿಲ್ಲಿ: ನವಜೋತ್  ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂತೆಗೆದುಕೊಂಡಿದ್ದಾರೆ ಹಾಗೂ  ಅದೇ ಹುದ್ದೆಯಲ್ಲಿ ತಮ್ಮ ಕರ್ತವ್ಯವನ್ನು ಮುಂದುವರಿಸಲಿದ್ದಾರೆ. 

ಶುಕ್ರವಾರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ದಿಲ್ಲಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿದ ನಂತರ ಮಾತನಾಡಿದ ನವಜೋತ್ ಸಿಂಗ್ ಸಿಧು "ನಾನು ನನ್ನ ಎಲ್ಲಾ ಕಳವಳವನ್ನು ರಾಹುಲ್ ಗಾಂಧಿಯೊಂದಿಗೆ ಹಂಚಿಕೊಂಡಿದ್ದೇನೆ. ಎಲ್ಲವನ್ನೂ ಬಗೆಹರಿಸಲಾಗಿದೆ" ಎಂದು ಹೇಳಿದರು.

"ಅವರು [ಸಿಧು] ರಾಹುಲ್ ಗಾಂಧಿಯವರೊಂದಿಗೆ ತಮ್ಮ ಕಳವಳವನ್ನು ಹಂಚಿಕೊಂಡರು. ಅವರ ಕಾಳಜಿಯನ್ನು ಇಲ್ಲಿ ನೋಡಿಕೊಳ್ಳಲಾಗುವುದು ಎಂದು ನಾವು ಅವರಿಗೆ ಹೇಳಿದ್ದೇವೆ. ರಾಜೀನಾಮೆ ಹಿಂಪಡೆದಿದ್ದೇನೆ ಎಂದು  ರಾಹುಲ್ ಗಾಂಧಿಗೆ ಭರವಸೆ ನೀಡಿದ್ದಾರೆ.   ಅವರು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ತಮ್ಮ ಕರ್ತವ್ಯಗಳನ್ನು ಮುಂದುವರಿಸುತ್ತಾರೆ''ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪಂಜಾಬಿನ ಉಸ್ತುವಾರಿ ಹರೀಶ್ ರಾವತ್ ಹೇಳಿದರು.

ಸೆಪ್ಟೆಂಬರ್ 28 ರಂದು  ನವಜೋತ್ ಸಿಂಗ್ ಸಿಧು ಪಕ್ಷದ ಪಂಜಾಬ್ ಘಟಕದಲ್ಲಿ ಸಮಸ್ಯೆ ಉಂಟಾದ ಕಾರಣ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದಾಗ್ಯೂ ಪಕ್ಷದ ನಾಯಕತ್ವವು ಅವರ ರಾಜೀನಾಮೆ ಸ್ವೀಕರಿಸಲಿಲ್ಲ ಹಾಗೂ ದಿಲ್ಲಿಯಲ್ಲಿ ಹಿರಿಯ ನಾಯಕರನ್ನು ಭೇಟಿ ಮಾಡಲು ತಿಳಿಸಿತ್ತು. 


 SHARE THIS

Author:

0 التعليقات: