ಮೈಸೂರು; ಚಾಮುಂಡಿಬೆಟ್ಟದಲ್ಲಿ ಭೂಕುಸಿತ
ಮೈಸೂರು: ನಗರದಲ್ಲಿ ಬುಧವಾರ ರಾತ್ರಿ ಇಡೀ ಸುರಿದ ಭಾರಿ ಮಳೆಗೆ ಚಾಮುಂಡಿಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದೆ. ಹಳೆಯ ಜಿಲ್ಲಾಧಿಕಾರಿ ಕಚೇರಿ ಸಮೀಪ ಮೂರು ಮರಗಳು ಧರೆಗುರುಳಿವೆ.
ನಗರದ ಗಂಗೋತ್ರಿ ಬಡಾವಣೆ, ಜನತಾ ನಗರ, ಮಧುವನ ಸೇರಿದಂತೆ ಅನೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ಸಿದ್ಧಲಿಂಗಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಲವತ್ತ ಗ್ರಾಮದಲ್ಲಿ ಸುಮಾರು 30 ಮನೆಗಳಿಗೆ ನೀರು ನುಗ್ಗಿದೆ.
ಬುಧವಾರ ರಾತ್ರಿಯಿಂದ ಗುರುವಾರ ನಸುಕಿನವರೆಗೂ 10 ಸೆಂ.ಮೀನಷ್ಟು ಮಳೆ ಸುರಿದಿದ್ದು, ಗುರುವಾರವೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.
0 التعليقات: