ಬಾರಾಮುಲ್ಲಾ ಎನ್ಕೌಂಟರ್ನಲ್ಲಿ ಉಗ್ರನ ಹತ್ಯೆ
ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಉಗ್ರನೋರ್ವ ಗುರುವಾರ ಹತನಾಗಿದ್ದಾನೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.
ಹತನಾದ ಉಗ್ರನು ಪೊಲೀಸರನ್ನು ಗುರಿಯಾಗಿಸಿ ಗುಂಡು ಹಾರಿಸಿದ್ದಾನೆ. ಇದಕ್ಕೆ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಆ ವೇಳೆ ಉಗ್ರನು ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಉಗ್ರನಿಂದ 1 ಪಿಸ್ತೂಲ್, 1 ಲೋಡೆಡ್ ಮ್ಯಾಗಜೀನ್ ಮತ್ತು 1 ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ. ಉಗ್ರನ ಬಗ್ಗೆ ಮಾಹಿತಿಯನ್ನು ಕಲೆಹಾಕುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.
0 التعليقات: