ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಲೆ ಎಸಿಬಿ ದಾಳಿ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಕಂದಾಯ ವಿಭಾಗಕ್ಕೆ ದಿಢೀರ್ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕಂದಾಯ ವಿಭಾಗದ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಸದ್ಯ ಕಂದಾಯ ವಿಭಾಗದಲ್ಲಿ ಕೆಲಸ ಸ್ಥಗಿತಗೊಳಿಸಿ ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
0 التعليقات: