ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್ ರನ್ನು ಭೇಟಿ ಮಾಡಿ ಭಾರತಕ್ಕೆ ಆಹ್ವಾನಿಸಿದ ಪ್ರಧಾನಿ ಮೋದಿ
ವ್ಯಾಟಿಕನ್ ಸಿಟಿ: ವ್ಯಾಟಿಕನ್ ಸಿಟಿಯಲ್ಲಿ ಶನಿವಾರ ನಡೆದ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ ಭಾರತಕ್ಕೆ ಆಹ್ವಾನಿಸಿದ್ದಾರೆ. ಪ್ರಧಾನಿ ಅವರ ಜೊತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಡಾ ಎಸ್ .ಜೈಶಂಕರ್ ಇದ್ದರು. ಸಭೆಯನ್ನು ಕೇವಲ 20 ನಿಮಿಷಗಳ ಕಾಲ ನಿಗದಿಪಡಿಸಲಾಗಿತ್ತು. ಆದರೆ ಒಂದು ಗಂಟೆ ಕಾಲ ನಡೆಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
"ಪೋಪ್ ಫ್ರಾನ್ಸಿಸ್ ಅವರೊಂದಿಗೆ ಅತ್ಯಂತ ಆತ್ಮೀಯ ಸಭೆ ನಡೆಸಿದ್ದೇನೆ. ಅವರೊಂದಿಗೆ ವ್ಯಾಪಕವಾದ ವಿಷಯಗಳ ಬಗ್ಗೆ ಚರ್ಚಿಸಲು ನನಗೆ ಅವಕಾಶ ಸಿಕ್ಕಿತು ಮತ್ತು ಭಾರತಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಿದ್ದೇನೆ" ಎಂದು ಪ್ರಧಾನಿ ಮೋದಿ ಅವರ ವೈಯಕ್ತಿಕ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
0 التعليقات: