Monday, 4 October 2021

ಯಾರೋ ಒಬ್ಬ ತರ್ಲೆಯಿಂದಾಗಿ ಸುಳ್ಯ ಕೋರ್ಟ್‌ಗೆ ಬರುವಂತಾಗಿದೆ; ಡಿಕೆಶಿ


ಯಾರೋ ಒಬ್ಬ ತರ್ಲೆಯಿಂದಾಗಿ ಸುಳ್ಯ ಕೋರ್ಟ್‌ಗೆ ಬರುವಂತಾಗಿದೆ; ಡಿಕೆಶಿ

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಂಗಳವಾರ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು.

ಇಂಧನ ಸಚಿವರಾಗಿದ್ದ ವೇಳೆ ವಿದ್ಯುತ್ ಕೇಳಿ ಕರೆ ಮಾಡಿದ ವ್ಯಕ್ತಿಯ ಜೊತೆ ವಾಗ್ವಾದ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳಲು ಡಿ. ಕೆ. ಶಿವಕುಮಾರ್ ಆಗಮಿಸಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳವಾರ ಬೆಳಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

"ನಾನು ಇಂಧನ ಸಚಿವನಾಗಿದ್ದಾಗ ಯಾರೋ ಒಬ್ಬ ತರ್ಲೆ ಫೋನ್ ಮಾಡಿದ್ದ. ನನ್ನ ಜೊತೆ ಬಾಯಿಗೆ ಬಂದ ಹಾಗೆ ಮಾತನಾಡಿದ್ದ. ಅವಾಚ್ಯ ಶಬ್ದಗಳಿಂದ ನನಗೆ ಬೈದಿದ್ದ. ನಮ್ಮ ಅಧಿಕಾರಿಗಳು ಅವನ ವಿರುದ್ದ ದೂರು ನೀಡಿದ್ದರು. ಅಧಿಕಾರಿಗಳಿಗೂ ಬಾಯಿಗೆ ಬಂದ ಹಾಗೇ ಬೈದಿದ್ದ. ಸಾಕ್ಷಿಯಾಗಿ ಬರಬೇಕು ಅಂತಾ ನ್ಯಾಯಾಲಯ ಹೇಳಿತ್ತು. ಪ್ರಾರಂಭದಲ್ಲಿ ನನಗೂ ಈ ಬಗ್ಗೆ ಗೊತ್ತಾಗಲಿಲ್ಲ. ನಮಗೆಲ್ಲಾ ಈ ವಿಚಾರದಲ್ಲಿ ಸ್ವಲ್ಪ ತಿಳುವಳಿಕೆ‌ ಕಡಿಮೆ. ಲುಕ್ ಔಟ್ ನೋಟಿಸ್, ಪೇಪರ್‌ನಲ್ಲಿ ಹಾಕ್ತೇವೆ ಎಂದು ಆರ್ಡರ್ ಮಾಡಿದ್ದಾರೆ ಅಂತಾ ಗೊತ್ತಾಯ್ತು. ಕೋರ್ಟ್ ಆದೇಶಕ್ಕೆ ತಲೆಬಾಗಿ ಬಂದಿದ್ದೇನೆ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

SHARE THIS

Author:

0 التعليقات: