Monday, 4 October 2021

ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣ: ಡ್ರಗ್ಸ್ ಪೆಡ್ಲರ್ ಸೇರಿ ಮುಂಬೈ ಎನ್ ಸಿಬಿಯಿಂದ ಮತ್ತಿಬ್ಬರ ಬಂಧನ


ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣ:
ಡ್ರಗ್ಸ್ ಪೆಡ್ಲರ್ ಸೇರಿ ಮುಂಬೈ ಎನ್ ಸಿಬಿಯಿಂದ ಮತ್ತಿಬ್ಬರ ಬಂಧನ

ಮುಂಬೈ: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ-Narcotics Control Bureau) ಅಧಿಕಾರಿಗಳು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದ್ದ ಹಲವರಲ್ಲಿ ಇಂದು ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಅಲ್ಲದೆ ಬಂಧಿತರು ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಎನ್ ಸಿಬಿ ಅಧಿಕಾರಿಗಳು ಮುಂಬೈನ ಜೋಗೇಶ್ವರಿ ಪ್ರದೇಶದ ಓರ್ವ ಡ್ರಗ್ಸ್ ಪೆಡ್ಲರ್ ಅನ್ನೂ ಕೂಡ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತ ಇಬ್ಬರನ್ನೂ ಇಂದು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅಕ್ಟೋಬರ್ 7 ರವರೆಗೆ ಎನ್ ಸಿಬಿ ವಶಕ್ಕೆ

ಇನ್ನು ಇದೇ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಇತರೆ ಇಬ್ಬರನ್ನು ಅಕ್ಟೋಬರ್ 7 ರವರೆಗೆ ಎನ್ ಸಿಬಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರನ್ನು ಅಕ್ಟೋಬರ್ 7ರ ವರೆಗೆ ಎನ್ ಸಿಬಿ ವಶಕ್ಕೆ ನೀಡಲಾಗಿದೆ.


ಡ್ರಗ್ಸ್ ಪ್ರಕರಣ ಸಂಬಂಧ ಬಂಧಿತ ಎಲ್ಲಾ ಎಂಟು ಆರೋಪಿಗಳ ವೈದ್ಯಕೀಯ ಪರೀಕ್ಷೆಯ ನಂತರ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರನ್ನು ಅಕ್ಟೋಬರ್ 7ರ ವರೆಗೆ ಎನ್ ಸಿಬಿ ವಶಕ್ಕೆ ನೀಡಿದೆ.SHARE THIS

Author:

0 التعليقات: