Thursday, 14 October 2021

ಗ್ಯಾಸ್ ಟ್ಯಾಂಕ್ ಗೆ ಬಿದ್ದು ಇಬ್ಬರು ಕಾರ್ಮಿಕರ ಸಾವು


ಗ್ಯಾಸ್ ಟ್ಯಾಂಕ್ ಗೆ ಬಿದ್ದು ಇಬ್ಬರು ಕಾರ್ಮಿಕರ ಸಾವು

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಬಾಟ್ಲಿಂಗ್ ಸ್ಥಾವರದಲ್ಲಿ ದುರಂತ ಸಂಭವಿಸಿದೆ. ಗುರುವಾರ ಟ್ಯಾಂಕ್ ಸ್ವಚ್ಛಗೊಳಿಸುವಾಗ ಗ್ಯಾಸ್ ಬಾಟ್ಲಿಂಗ್ ಪ್ಲಾಂಟ್‌ನಲ್ಲಿ ಟ್ಯಾಂಕ್‌ ಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಜ್ಜಯಿನಿ ಜಿಲ್ಲೆಯ ಘಟ್ಟಿಯಾ ತಹಸಿಲ್‌ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ರಾಜೇಂದ್ರ ಸಿಂಗ್(30) ಮತ್ತು ಲಖನ್ ಸಿಂಗ್(27) ಎಂದು ಗುರುತಿಸಲಾಗಿದೆ ಎಂದು ಉಪವಿಭಾಗಾಧಿಕಾರಿ(ಎಸ್‌ಡಿಒಪಿ) ಆರ್.ಕೆ. ರಾಯ್ ತಿಳಿಸಿದ್ದಾರೆ.

ಘಟನೆ ನಡೆದ ಗ್ಯಾಸ್ ಟ್ಯಾಂಕ್ ಅನ್ನು ಖಾಲಿ ಮಾಡಲಾಗುತ್ತಿದ್ದು, ಪ್ರಕ್ರಿಯೆ ಪೂರ್ಣಗೊಂಡ ನಂತರ ಅವರ ಮೃತದೇಹಗಳನ್ನು ಹೊರತೆಗೆಯಗುತ್ತದೆ. ಪ್ರಸ್ತುತ ತನಿಖೆ ನಡೆಯುತ್ತಿದೆ. ನಿರ್ಲಕ್ಷ್ಯದ ಪ್ರಕರಣ ದಾಖಲಿಸಲಾಗುವುದು ಎಂದು ರಾಯ್ ಹೇಳಿದ್ದಾರೆ.SHARE THIS

Author:

0 التعليقات: