Wednesday, 27 October 2021

ಗೊಬ್ಬರದ ವಿಚಾರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ನಮಗಿಲ್ಲ: ಸಿದ್ದರಾಮಯ್ಯಗೆ ಕೇಂದ್ರ ಸಚಿವ ಭಗವಂತ ಖೂಬಾ ತಿರುಗೇಟು


 ಗೊಬ್ಬರದ ವಿಚಾರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ನಮಗಿಲ್ಲ: ಸಿದ್ದರಾಮಯ್ಯಗೆ ಕೇಂದ್ರ ಸಚಿವ ಭಗವಂತ ಖೂಬಾ ತಿರುಗೇಟು

ಬೆಂಗಳೂರು: 'ಗೊಬ್ಬರದ ವಿಚಾರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ನಮಗಿಲ್ಲ. ಕರ್ನಾಟಕದಲ್ಲಿ ಯಾವುದೇ ರಸಗೊಬ್ಬರ ಕೊರತೆಯಿಲ್ಲ' ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.  

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ''ಕರ್ನಾಟಕದಲ್ಲಿ ಯಾವುದೇ ರಸಗೊಬ್ಬರ ಕೊರತೆಯಿಲ್ಲ, ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿನ ಭೀತಿಯಿಂದ ರಸಗೊಬ್ಬರದ ಕೊರತೆಯಿದೆ ಎಂದು ಸುಳ್ಳು ವದಂತಿ ಸೃಷ್ಟಿಸುತ್ತಿದೆ ಮತ್ತು ಕೇಂದ್ರದಿಂದ ಕರ್ನಾಟಕಕ್ಕೆ ಸಮರ್ಪಕ ರಸಗೊಬ್ಬರ ಒದಗಿಸಲಾಗುತ್ತಿದೆ. ಸಿದ್ದರಾಮಯ್ಯನವರ ಸುಳ್ಳಿನ ಹೇಳಿಕೆಗೆ ಕವಡೆ ಕಾಸಿನ‌ ಕೀಮತ್ತು ಬೇಡ ಎಂದು ಸ್ಪಷ್ಟಪಡಿಸಿದೆ'' ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. 


SHARE THIS

Author:

0 التعليقات: