''ಸಿದ್ದರಾಮಯ್ಯರ ಮೂರನೇ ದೆಹಲಿ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ'': ಬಿಜೆಪಿ ಪ್ರಶ್ನೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ದೆಹಲಿ ಭೇಟಿಯಿಂದ ಡಿಕೆ.ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತೊಂದರೆಯಾಗಲಿದೆಯೇ ಎಂದು ಪ್ರಶ್ನಿಸುವ ಮೂಲಕ ಬಿಜೆಪಿ ಟೀಕಿಸಿದೆ.
''ಸಿದ್ದರಾಮಯ್ಯ ಅವರ ಮೊದಲ ದೆಹಲಿ ಭೇಟಿ ಡಿಕೆಶಿ ಮಾಡಿದ ಪದಾಧಿಕಾರಿಗಳ ಪಟ್ಟಿಯನ್ನು ನಿರ್ಲಕ್ಷ್ಯ ಮಾಡುವಂತೆ ಮಾಡಿತು''.
''ಎರಡನೇ ಭೇಟಿ ಪದಾಧಿಕಾರಿಗಳ ಪಟ್ಟಿಯನ್ನೇ ತಿರಸ್ಕರಿಸುವಂತೆ ಮಾಡಿತು. ಸಿದ್ದರಾಮಯ್ಯ ಅವರ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?'' ಎಂದು ಬಿಜೆಪಿ ಟ್ವೀಟ್ ಮಾಡಿದೆ.
0 التعليقات: