Friday, 8 October 2021

ಬಿಜೆಪಿ ನಾಯಕರು ಕಾರು ಓಡಿಸುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ: ಡಿ.ಕೆ.ಶಿವಕುಮಾರ್‌


 ಬಿಜೆಪಿ ನಾಯಕರು ಕಾರು ಓಡಿಸುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ: ಡಿ.ಕೆ.ಶಿವಕುಮಾರ್‌

ಬೆಂಗಳೂರು : “ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ  ವೀಡಿಯೊ ಟ್ವೀಟ್ ಮಾಡಿ ಈ ಬಗ್ಗೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

“ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ಎಂದು ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವೀಡಿಯೊ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ” ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.


SHARE THIS

Author:

0 التعليقات: