Tuesday, 5 October 2021

ರಾಜ್ಯದಲ್ಲಿ ಮುಂದುವರೆದ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ,ಆರೆಂಜ್' ಅಲರ್ಟ್


ರಾಜ್ಯದಲ್ಲಿ ಮುಂದುವರೆದ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ,ಆರೆಂಜ್' ಅಲರ್ಟ್ 

ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದೂ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಮೈಸೂರು, ಮಂಡ್ಯದಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.




SHARE THIS

Author:

0 التعليقات: