ಪುನೀತ್ ರಾಜ್ಕುಮಾರ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ಹೊಸದಿಲ್ಲಿ: ಕನ್ನಡ ಚಲನಚಿತ್ರ ನಟ ಪುನೀತ್ ರಾಜ್ ಕುಮಾರ್(46 ವರ್ಷ) ಅವರು ಶುಕ್ರವಾರ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ರಾಜಕಾರಣಿಗಳು ಜನಪ್ರಿಯ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
"ವಿಧಿಯ ಕ್ರೂರತೆ ಪ್ರತಿಭಾವಂತ ನಟ ಪುನೀತ್ ರಾಜ್ಕುಮಾರ್ ಅವರನ್ನು ನಮ್ಮಿಂದ ದೂರ ಮಾಡಿದೆ. ಇದು ಅವರು ಸಾಯುವ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಕೆಲಸ ಹಾಗೂ ಅದ್ಭುತ ವ್ಯಕ್ತಿತ್ವಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ" ಎಂದು ಪ್ರಧಾನಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
0 التعليقات: