Friday, 22 October 2021

ವಾಹನ ಸವಾರರಿಗೆ ಬಿಗ್ ಶಾಕ್ : ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ


ವಾಹನ ಸವಾರರಿಗೆ ಬಿಗ್ ಶಾಕ್ : ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ (Petrol Diesel Price) ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು, ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 35 ಪೈಸೆ ಮತ್ತೆ ಹೆಚ್ಚಳವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 37 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ದರ 110.98 ರೂಪಾಯಿ ಹಾಗೂ ಡೀಸೆಲ್ ಬೆಲೆ ಮತ್ತೆ 37 ಪೈಸೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 101.86 ರೂಪಾಯಿ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ ಹೆಚ್ಚಳವಾಗಿದ್ದು, ಲೀಟರ್ ಪೆಟ್ರೋಲ್ ದರ 107.24 ರೂಪಾಯಿ ಹಾಗೂ 35 ಪೈಸೆ ಏರಿಕೆ ಕಂಡ ಲೀಟರ್ ಡೀಸೆಲ್ ಬೆಲೆ 95.98 ರೂಪಾಯಿ ದಾಖಲಾಗಿದೆ.

ಮುಂಬೈನಲ್ಲಿ ಪೆಟ್ರೋಲ್ ದರ 34 ಪೈಸೆ ಹೆಚ್ಚಳವಾಗಿದ್ದು, ಲೀಟರ್ ಪೆಟ್ರೋಲ್ ದರ 113.08 ರೂಪಾಯಿ ಹಾಗೂ ಡೀಸೆಲ್ ಬೆಲೆ 37 ಪೈಸೆ ಏರಿಕೆಯಾಗಿದ್ದು, 103.97 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 30 ಪೈಸೆ ಹೆಚ್ಚಳವಾಗಿದ್ದು, 104.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆಯಲ್ಲಿ 24 ಪೈಸೆ ಏರಿಕೆಯಾಗಿದ್ದು 100.22 ರೂಪಾಯಿಗೆ ಮಾರಾಟವಾಗುತ್ತಿದೆ.


SHARE THIS

Author:

0 التعليقات: