Saturday, 2 October 2021

ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದ ಉಪ ಚುನಾವಣೆ: ಮತ ಎಣಿಕೆ ಆರಂಭ, ಇಂದು ಸಿಎಂ ಮಮತಾ ಬ್ಯಾನರ್ಜಿ ಭವಿಷ್ಯ ನಿರ್ಧಾರ


ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದ ಉಪ ಚುನಾವಣೆ: 
ಮತ ಎಣಿಕೆ ಆರಂಭ, ಇಂದು ಸಿಎಂ ಮಮತಾ ಬ್ಯಾನರ್ಜಿ ಭವಿಷ್ಯ ನಿರ್ಧಾರ

ಭವಾನಿಪುರ(ಪಶ್ಚಿಮ ಬಂಗಾಳ): ಇಂದು ಅಕ್ಟೋಬರ್ 3 ಭಾನುವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ರಾಜಕೀಯ ಭವಿಷ್ಯ ನಿರ್ಧಾರವಾಗುವ ದಿನ.

ನಂದಿಗ್ರಾಮ ಕ್ಷೇತ್ರದಲ್ಲಿ ಸೋತು ಟಿಎಂಸಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಸಿಕ್ಕಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂತು. 6 ತಿಂಗಳ ಬಳಿಕ ಭವಾನಿಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಎಂಸಿಯಿಂದ ಮಮತಾ ಬ್ಯಾನರ್ಜಿ, ಬಿಜೆಪಿಯಿಂದ ಪ್ರಿಯಾಂಕ ತಿಬ್ರೆವಾಲ್ ಸ್ಪರ್ಧಿಸಿದ್ದಾರೆ.

ಇಂದು ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಮಧ್ಯಾಹ್ನದ ಹೊತ್ತಿಗೆ ಯಾರು ಗೆಲ್ಲುತ್ತಾರೆ ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ. ಇದರ ಜೊತೆಗೆ ಜಂಗಿಪುರ್ ಮತ್ತು ಸಮ್ಸೆರ್ಗಂಜ್ ವಿಧಾನಸಭಾ ಕ್ಷೇತ್ರಗಳಿಗೆ ಸಹ ಉಪ ಚುನಾವಣೆ ಮೊನ್ನೆ 30ರಂದು ನಡೆದಿದ್ದು ಇಂದೇ ಫಲಿತಾಂಶ ಪ್ರಕಟವಾಗಲಿದೆ.SHARE THIS

Author:

0 التعليقات: