Thursday, 14 October 2021

ಪ್ರೊ. ಜಿ.ಕೆ. ಗೋವಿಂದರಾವ್ ನಿಧನ


ಪ್ರೊ. ಜಿ.ಕೆ. ಗೋವಿಂದರಾವ್ ನಿಧನ

ಬೆಂಗಳೂರು : ವಿಚಾರವಾದಿ, ಸಾಹಿತಿ, ನಟ ಪ್ರೊ. ಜಿ.ಕೆ. ಗೋವಿಂದರಾವ್ ಅವರು ಹುಬ್ಬಳ್ಳಿಯ ಮಗಳ ಮನೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. 

ಪ್ರೊ. ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು.

ರಂಗಭೂಮಿ, ಸಿನಿಮಾರಂಗದ ಒಡನಾಟ ಇವರಿಗಿದೆ. ಸಮಕಾಲೀನ ಪ್ರಜಾಸತ್ತಾತ್ಮಕ ಆಂದೋಲನಗಳಲ್ಲಿ ಭಾಗವಹಿಸಿ ತಮ್ಮ ಜನಪರ ನಿಲುವನ್ನು ಪ್ರಕಟಿಸುವುದು ಅವರಿಗೆ ಸದಾ ಆದ್ಯತೆಯ ವಿಷಯವಾಗಿತ್ತು.

ಪ್ರಕಟಿತ ಕೃತಿಗಳು

ಈಶ್ವರ ಅಲ್ಲಾ (ಕಿರುಕಾದಂಬರಿ), ಶೇಕ್ಸ್‌ ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್‌ ಪಿಯರ್ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? (ಸಂಕೀರ್ಣ ಬರಹಗಳ ಸಂಗ್ರಹಗಳು)





SHARE THIS

Author:

0 التعليقات: