Tuesday, 12 October 2021

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ :

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ :

ಬೆಂಗಳೂರು : ನಗರದಲ್ಲಿ ಕಟ್ಟಡ ಕುಸಿಯುವ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಸಿಲಿಕಾನ್ ಸಿಟಿಯ ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ವೃಷಭಾವತಿ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡದ ಕೆಳ ಮಹಡಿ ಕುಸಿಯುವ ಹಂತದಲ್ಲಿದ್ದು, ನಿವಾಸಿಗಳು ಕಟ್ಟಡ ಕುಸಿತದ ಭೀತಿಯನ್ನು ಎದುರಿಸುತ್ತಿದ್ದಾರೆ. ಇದರಿಂದಾಗಿ ಸಚಿವ ಕೆ.ಗೋಪಾಲಯ್ಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿನ ವೃಷಭಾವತಿ ನಗರದಲ್ಲಿ ಮೂರು ಅಂತಸ್ತಿನ ಕಟ್ಟವೊಂದು ಕುಸಿಯುವ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ಸ್ಥಳೀಯ ಶಾಸಕರು ಹಾಗು ಅಬಕಾರಿ ಸಚಿವರಾದ ಕೆ ಗೋಪಾಲಯ್ಯನವರು ಬಿ ಬಿ ಎಂ ಪಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮ ಗಳಿಗೆ ಮಾತನಾಡಿದ ಸಚಿವರು ಮನೆಯಲ್ಲಿ ಬಾಡಿಗೆಗೆ ಇದ್ದವರನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಅಕ್ಕ ಪಕ್ಕದ ಮನೆಯಲ್ಲಿ ವಾಸವಿದ್ದವರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅವರುಗಳಿಗೆ ವಸತಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಯಾರಿಗೂ ಹಾನಿ ಯಾಗದಂತೆ ತೆರವುಗೊಳಿಸುವಂತೆ ಬಿ ಬಿ ಎಂ ಪಿ ಅಧಿಕಾರಿಗಳೊಂದಿಗೆ ಸೂಚಿಸಲಾಗಿದೆ ಎಂದರು.

ಮನೆಯ ಮಾಲೀಕರು ನಾಪತ್ತೆಯಾಗಿದ್ದು. ಪೊಲೀಸ್ ರು ಹುಡುಕುವ ಯತ್ನದಲ್ಲಿದ್ದಾರೆ ನಿರಾಶ್ರಿತರಿಗೆ ನಮ್ಮ ಮತ್ತು ಸರ್ಕಾರ ಕಡೆಯಿಂದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಸ್ಥಳಕ್ಕೆ ಬಿ ಬಿ ಎಂ ಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮತ್ತು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.



SHARE THIS

Author:

0 التعليقات: