Tuesday, 2 November 2021

ನೀರಜ್ ಚೋಪ್ರಾ ಸಹಿತ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ


ನೀರಜ್ ಚೋಪ್ರಾ ಸಹಿತ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಸಹಿತ 12 ಕ್ರೀಡಾಪಟುಗಳು ಈ ವರ್ಷದ ಪ್ರತಿಷ್ಟಿತ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಯುವಜನ ವ್ಯವಹಾರಗಳು ಹಾಗೂ  ಕ್ರೀಡಾ ಸಚಿವಾಲಯವು 2021 ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲಾಗುವ 12 ಕ್ರೀಡಾಪಟುಗಳ ಹೆಸರನ್ನು ಮಂಗಳವಾರ ಪ್ರಕಟಿಸಿದೆ.ಶಿಖರ್ ಧವನ್ ಸಹಿತ 35 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿಯನ್ನು ಕ್ರೀಡಾ ಸಚಿವಾಲಯ ಘೋಷಿಸಿದೆ.

ಟೋಕಿಯೊ ಒಲಿಂಪಿಕ್ಸ್ ಹಾಗೂ  ಪ್ಯಾರಾಲಿಂಪಿಕ್ಸ್  ಪದಕ ವಿಜೇತರುಗಳಿಗೆ ಭಾರತದ ಅತ್ಯುನ್ನತ ಕ್ರೀಡಾ ಗೌರವವನ್ನು ನೀಡಲಾಗುತ್ತದೆ. ಈ ಪಟ್ಟಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ದಂತಕಥೆ ಮಿಥಾಲಿ ರಾಜ್ ಹಾಗೂ  ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಕೂಡ ಇದ್ದಾರೆ.

ನವೆಂಬರ್ 13 ರಂದು ದಿಲ್ಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುವುದು. ಎಲ್ಲಾ ಕ್ರೀಡಾಪಟುಗಳು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ತಮ್ಮ ಪ್ರಶಸ್ತಿಗಳನ್ನು ಸ್ವೀಕರಿಸುತ್ತಾರೆ. ಕ್ರೀಡೆಯಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಹಾಗೂ ಪುರಸ್ಕರಿಸಲು ಪ್ರತಿ ವರ್ಷ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ.SHARE THIS

Author:

0 التعليقات: