ರಾಜ್ಯದಲ್ಲಿ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ, 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
1 ರಿಂದ 19 ವರ್ಷದ ಮಕ್ಕಳ ಪೋಷಕರುಗಳಿಗೆ ಮಹತ್ವದ ಮಾಹಿತಿ: ಈ ದಿನಾಂಕದಂದು ತಪ್ಪದೇ ಜಂತುಹುಳು ಮಾತ್ರೆ ತಪ್ಪದೇ ಪಡೆದುಕೊಳ್ಳಿ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆಮುಂದುವರೆಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು,ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ ಶಾಲೆ-ಕಾಲೇಜುಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ,ರಾಮನಗರ ಜಿಲ್ಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಶಾಲೆ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಸ್ ರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಮಳೆ ಹಾನಿ, ಪರಿಹಾರ ಕ್ರಮಗಳ ಬಗ್ಗೆ ಡಿಸಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ.
0 التعليقات: