Monday, 1 November 2021

ರಾಜ್ಯದಲ್ಲಿಂದು 188 ಮಂದಿಗೆ ಕೊರೋನ ದೃಢ, ಇಬ್ಬರು ಸಾವು

 ರಾಜ್ಯದಲ್ಲಿಂದು 188 ಮಂದಿಗೆ ಕೊರೋನ ದೃಢ, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 188 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, 318 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,88,521ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,084ಕ್ಕೆ ತಲುಪಿದೆ. 

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 8512ಕ್ಕೆ ಇಳಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

2 ಸೋಂಕಿತರು ಬಲಿ: ಮೈಸೂರು ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 188 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 4, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 95, ಚಿಕ್ಕಬಳ್ಳಾಪುರ 2,  ಚಿಕ್ಕಮಗಳೂರು 2, ಚಿತ್ರದುರ್ಗ 4, ದಕ್ಷಿಣ ಕನ್ನಡ 12, ದಾವಣಗೆರೆ 1, ಹಾಸನ 11, ಕಲಬುರಗಿ 2, ಕೊಡಗು 10, ಕೋಲಾರ 1, ಮಂಡ್ಯ 4, ಮೈಸೂರು 16, ಶಿವಮೊಗ್ಗ 1, ತುಮಕೂರು 5, ಉಡುಪಿ 6, ಉತ್ತರ ಕನ್ನಡ 7, ವಿಜಯಪುರ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 95 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಶುಕ್ರವಾರದಂದು 95 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದೇ ಮೊದಲ ಬಾರಿಗೆ ಮರಣ ಸಂಖ್ಯೆ ಶೂನ್ಯವಾಗಿದೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,51,967 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,281 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,29,207 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 


SHARE THIS

Author:

0 التعليقات: