Thursday, 4 November 2021

ರಾಜ್ಯದಲ್ಲಿಂದು 261 ಮಂದಿಗೆ ಕೊರೋನ ದೃಢ, 5 ಮಂದಿ ಸಾವು

 ರಾಜ್ಯದಲ್ಲಿಂದು 261 ಮಂದಿಗೆ ಕೊರೋನ ದೃಢ, 5 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಗುರುವಾರ 261 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 5 ಜನರು ಸೋಂಕಿಗೆ ಬಲಿಯಾಗಿದ್ದು, 296 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,89,275ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,095ಕ್ಕೆ ತಲುಪಿದೆ.        

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 8,267ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

5 ಸೋಂಕಿತರು ಬಲಿ: ಬೆಂಗಳೂರು ನಗರ 1, ದಕ್ಷಿಣ ಕನ್ನಡ 1, ಹಾಸನ 1, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 261 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 157, ಬೀದರ್ 1, ಚಾಮರಾಜನಗರ 1, ಚಿತ್ರದುರ್ಗ 2, ದಕ್ಷಿಣ ಕನ್ನಡ 16, ಧಾರವಾಡ 6, ಹಾಸನ 7, ಕಲಬುರಗಿ 2, ಕೊಡಗು 9, ಕೋಲಾರ 5, ಮಂಡ್ಯ 4, ಮೈಸೂರು 13, ರಾಮನಗರ 1, ಶಿವಮೊಗ್ಗ 6, ತುಮಕೂರು 15, ಉಡುಪಿ 6, ಉತ್ತರ ಕನ್ನಡ 4, ವಿಜಯಪುರ  ಜಿಲ್ಲೆಯಲ್ಲಿ 3 ಪ್ರಕರಣ ಪತ್ತೆಯಾಗಿವೆ.  

ರಾಜಧಾನಿಯಲ್ಲಿ 157 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಗುರುವಾರದಂದು 157 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,52,414 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,292 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,29,740 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.  


SHARE THIS

Author:

0 التعليقات: