ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ:
ಕಳೆದ ಒಂದು ವಾರದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನು ವರುಣ ದೇವ ಪ್ರವೇಶಿಸುತ್ತಿದ್ದಾನೆ. ಕಳೆದ ವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿತ್ತು. ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಬಂಗಾಳ ಕೊಲ್ಲಿಯ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಕನ್ನಡ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಅಬ್ಬರ ಮುಂದುವರಿಯಲಿದೆ. ಶನಿವಾರದವರೆಗು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇತ್ತ ನಿರಂತರ ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕ ಸಂದೇಶ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಷ್ಠ 22 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕೈ ದು ದಿನ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗಲಿದೆ. ಬೆಂಗಳೂರಿನ ರಸ್ತೆಗಳ ಗುಂಡಿಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಭಯದಲ್ಲಿ ಸಂಚರಿಸುವ ಪರಿಸ್ಥಿತಿ ಎದುರಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿ, ಟ್ರಫ್ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆ ಅಬ್ಬರಿಸಿದೆ. ಒಳನಾಡಿನ ಕೆಲ ಜಿಲ್ಲೆಗಳಿಗೆ ಸೀಮಿತವಾಗಿದ್ದ 'ಯೆಲ್ಲೋ ಅಲರ್ಟ್' ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಿಗೆ ನೀಡಲಾಗಿದ್ದ ಯೆಲ್ಲೋ ಅಲರ್ಟ್ ಅನ್ನು ಆರೆಂಜ್ ಅಲರ್ಟ್ ಆಗಿ ಪರಿವರ್ತಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಎಲ್ಲೆಲ್ಲಿ ಮಳೆಯಾಗಿದೆ?
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿರುವ ವರದಿಯಾಗಿವೆ. ಕಲಬುರಗಿ, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಶನಿವಾರದವರೆಗೂ ಇದೇ ರೀತಿಯ ವಾತಾವರಣವಿರಲಿದೆ.
ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ
ಇನ್ನುಳಿದಂತೆ ದಾವಣಗೆರೆ, ಹಾಸನ, ಹಾವೇರಿ, ಕೋಲಾರ, ಶಿವಮೊಗ್ಗ, ಚಾಮರಾಜನಗರ, ಕೊಡಗು,. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆಯಾಗಿದೆ. ಅಕಾಲಿಕ ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಮುಂದಿನ ಮೂರು ದಿನ ಈ ಭಾಗದಲ್ಲಿ ಮಳೆಯ ಸಿಂಚನ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
0 التعليقات: