ಭಾರೀ ಮಳೆ,ಗಾಳಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಆಗಮನ ವಿಮಾನ ಸಂಜೆ 6 ರವರೆಗೆ ಸ್ಥಗಿತ
ಚೆನ್ನೈ: ಭಾರೀ ಮಳೆ ಹಾಗೂ ಗಾಳಿಯಿಂದಾಗಿ ಚೆನ್ನೈ ವಿಮಾನ ನಿಲ್ದಾಣವು ಮಧ್ಯಾಹ್ನ 1.15 ರಿಂದ ಸಂಜೆ 6 ರವರೆಗೆ ಆಗಮಿಸುವ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿದೆ. ನಿರ್ಗಮನವು ನಿಗದಿತವಾಗಿ ಮುಂದುವರಿಯುತ್ತದೆ ಎಂದು ವಿಮಾನ ನಿಲ್ದಾಣವು ಇಂದು ಮಧ್ಯಾಹ್ನ ಟ್ವೀಟ್ ಮಾಡಿದೆ.
"ಪ್ರಯಾಣಿಕರ ಸುರಕ್ಷತೆಯ ಅಂಶ ಹಾಗೂ ಗಾಳಿಯ ತೀವ್ರತೆಯನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ" ಎಂದು ವಿಮಾನ ನಿಲ್ದಾಣ ತಿಳಿಸಿದೆ.
ರಾಜಧಾನಿ ಚೆನ್ನೈ ಸೇರಿದಂತೆ ತಮಿಳುನಾಡಿನಾದ್ಯಂತ ಆರು ಜಿಲ್ಲೆಗಳಲ್ಲಿ ಈ ವಾರ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಭಾರೀ ಮಳೆಯಾಗುತ್ತಿದೆ ಹಾಗೂ ಇಂದು ಸಂಜೆ ಕರಾವಳಿ ದಾಟುವುದನ್ನು ನಿರೀಕ್ಷಿಸಲಾಗಿದೆ.
0 التعليقات: