ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ :
6 ಮಂದಿ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ
ಬಿಹಾರ್ : ಟ್ರಕ್ ಮತ್ತು ಎಸ್ ಯುವಿ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತ ದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಿಹಾರದ ಜಮುಯಿ ಎಂಬಲ್ಲಿ ನಡೆದಿದೆ.
ಸಿಕಂದ್ರಾ-ಶೇಖ್ ಪುರ ರಸ್ತೆಯಲ್ಲಿ ಟ್ರಕ್ ಮತ್ತು ಎಸ್ಯುವಿ ವಾಹನದ ನಡುವೆ ಭೀಕರ ಅಪಘಾತ ನಡೆದಿದ್ದು, ಆರು ಮಂದಿ ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆನೀಡಲಾಗುತ್ತಿದೆ. ಮೃತಪಟ್ಟವರು ಜಮುಯಿಯ ಖೈರಾ ಬ್ಲಾಕ್ನ ನೌದಿಹಾದವರು ಎಂದು ಗುರುತಿಸಲಾಗಿದ್ದು, ಹಲ್ಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರೆಲ್ಲರೂ ಜಮುಯಿ ಖೈರಾದಿಂದ ಪಾಟ್ನಾಕ್ಕೆ ಒಂದು ಅಂತ್ಯಕ್ರಿಯೆಗಾಗಿ ತೆರಳಿದ್ದರು. ಅಲ್ಲಿಂದ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.
0 التعليقات: