6 ಮಂದಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್!
ಬೆಂಗಳೂರು : ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 6 ಮಂದಿ ಕಾಂಗ್ರೆಸ್ ನಾಯಕರಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್, ಈಶ್ವರ ಖಂಡ್ರೆ ಸೇರಿ 6 ಜನರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ನಿಂದ ಸಮನ್ಸ್ ಜಾರಿಗೊಳಿಸಲಾಗಿದೆ ಎಂದು ಹೇಳಲಾಗ್ತಿದೆ. ಡಿಸೆಂಬರ್ 22ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಕೋವಿಡ್ ನಿಯಮಯ ಉಲ್ಲಂಘನೆ ಹಿನ್ನೆಲೆ ಉಪ್ಪಾರಪೇಟೆ ಠಾಣೆ ಪೊಲೀಸರು ದೂರು ನೀಡಿದ್ದರು. ಅದರಂತೆ ಸಮನ್ಸ್ ಜಾರಿ ಮಾಡಲಾಗಿದೆ ಎಂಬ ಮಾಹಿತಿಯಿದೆ.
0 التعليقات: